ವಾಷಿಂಗ್ಟನ್ : ಇತ್ತೀಚೆಗೆ ವಿಮಾನಗಳಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ, ಗೋ ಫಸ್ಟ್ ಬಳಿಕ ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಅಮೆರಿಕನ್ ಏರ್ಲೈನ್ಸ್ನ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಭಾರತದ ಪ್ರಯಾಣಿಕನೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ ಬಂದಿಳಿದ ನಂತರ ಆರೋಪಿಯನ್ನ ಸಿಐಎಸ್ಎಫ್ ಅಧಿಕಾರಿಗಳು ಬಂಧಿಸಿದ್ದಾರೆ.ವಿಮಾನಯಾನ