ವಿಜಯ್ ಮಲ್ಯ ಗಡಿಪಾರು ಕೇಸ್; ತೀರ್ಪು ಪ್ರಕಟಿಸಿದ ಲಂಡನ್ ಕೋರ್ಟ್

ಲಂಡನ್, ಮಂಗಳವಾರ, 11 ಡಿಸೆಂಬರ್ 2018 (07:56 IST)

ಲಂಡನ್ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿಸದೆ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ಗಡಿಪಾರು ಕುರಿತು ಲಂಡನ್ ಕೋರ್ಟ್ ತೀರ್ಪು ಪ್ರಕಟ ಮಾಡಿದೆ.


ಉದ್ಯಮಿ ವಿಜಯ್ ಮಲ್ಯ  ಭಾರತದ ಬ್ಯಾಂಕ್ ಗಳಿಂದ ಸಾಲ ಪಡೆದು ಅದನ್ನು ಮರುಪಾವತಿ ಮಾಡದೆ ಲಂಡನ್ ಗೆ ಪಲಾಯಾನ ಮಾಡಿದ್ದರು. ಮಲ್ಯ ಅವರನ್ನು ಹಸ್ತಾಂತರಿಸುವಂತೆ ಭಾರತದ ತನಿಖಾ ಸಂಸ್ಥೆಗಳು ಲಂಡನ್‌ನ ವೆಸ್ಟ್‌ ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಸಿದ ಕೋರ್ಟ್ ಇದೀಗ ತೀರ್ಪನ್ನು ಪ್ರಕಟಿಸಿದ್ದು, ಭಾರತಕ್ಕೆ ಮಲ್ಯ ಅವರನ್ನು ಗಡಿಪಾರು ಮಾಡುವಂತೆ ತೀರ್ಪು ನೀಡಿದೆ.


ಇನ್ನು ತೀರ್ಪು ಪ್ರಕಟವಾಗುತ್ತಿದ್ದ ಬೆನ್ನಲೇ  ನ್ಯಾಯಾಲಯದ ಗಡಿಪಾರು ತೀರ್ಪುನ್ನು ಪ್ರಶ್ನಿಸಿ ವಿಜಯ್ ಮಲ್ಯ ಲಂಡನ್ ಹೈ ಕೋರ್ಟ್ ಗೆ ಮೇಲ್ನನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಪರವಾಗಿ ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗದಿದ್ದರೆ 28 ದಿನಗಳ ಒಳಗೆ ಮಲ್ಯ ಬ್ರಿಟನ್ ತೊರೆಯಬೇಕಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಅಡ್ಡಬಂದ ಕಾರಣಕ್ಕೆ ಯುವಕನಿಗೆ ಎಲ್ಲಾ ಸೇರಿ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಿಗೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಹೆಚ್ಚಾಗಿದ್ದು, ...

news

ಸಂಭೋಗದ ವೇಳೆ ಪತಿಯನ್ನು ಕೊಲೆ ಮಾಡಿದ ಪತ್ನಿ. ಕಾರಣವೇನು ಗೊತ್ತಾ?

ಕೋಲ್ಕತ್ತಾ : ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದ ಘಟನೆ ...

news

ಡ್ರೆಸ್ ವಿಚಾರಕ್ಕೆ ಜಗಳವಾಡಿದ ಸಹೋದರಿಯರು. ಆಮೇಲೆ ನಡೆದದ್ದೇನು ಗೊತ್ತಾ?

ಒಡಿಶಾ : ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ ಸಹೋದರಿಯರಲ್ಲೊಬ್ಬಾಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ...

news

ಇಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ

ನವದೆಹಲಿ : ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ...