ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಮಹಿಳೆ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಖಮೆನ್ಲೋಕ್ ಪ್ರದೇಶದಲ್ಲಿ ತಡರಾತ್ರಿ ಈ ದಾಳಿ ನಡೆದಿದೆ. ಮೃತ ದೇಹಗಳು ಗುರುತು ಸಿಗದಂತೆ ಗಾಯಗಳಾಗಿದ್ದು, ಅನೇಕ ಸುತ್ತಿನ ಗುಂಡುಗಳು ದೇಹವನ್ನು ಛಿದ್ರಗೊಳಿಸಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಇಂಫಾಲ್ನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಮೇಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ ಕಳೆದ