ಇಸ್ಲಮಾಬಾದ್ : ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಬಾಂಧವ್ಯವನ್ನು ಬಯಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ್ದಾರೆ.ಯುಎನ್ಎಸ್ಸಿ (ವಿಶ್ವಸಂಸ್ಥೆಯ ಭದ್ರತಾ ಮಂಡಳಿ) ನಿರ್ಣಯಗಳಿಗೆ ಅನುಗುಣವಾಗಿ ಜಮ್ಮು ಮತ್ತು ಕಾಶ್ಮೀರ ವಿವಾದಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಹೊಸದಾಗಿ ನೇಮಕಗೊಂಡ ಆಸ್ಟ್ರೇಲಿಯಾದ ಹೈ ಕಮಿಷನರ್ ನೀಲ್ ಹಾಕಿನ್ಸ್ ಅವರು ಇಸ್ಲಾಮಾಬಾದ್ನಲ್ಲಿ ತಮ್ಮನ್ನು ಭೇಟಿಯಾಗಿ ಸಭೆ ನಡೆಸಿದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ