ಮುಂಬೈ: ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 37 ರನ್ ಗಳಿಂದ ಸೋಲುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಟದ ಮೊದಲ ಸೋಲುಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 170 ರನ್ ಗಳಿಸಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್ (53 ರನ್), ಕೃಣಾಲ್ ಪಾಂಡ್ಯ 42 ರನ್ ಮತ್ತು ಹಾರ್ದಿಕ್ ಪಾಂಡ್ಯ 25 ರನ್ ಗಳಿಸಿದರು.ಗೆಲುವಿನ ಗುರಿ ಬೆನ್ನಟ್ಟಿದ ಚೆನ್ನೈ ಆರಂಭವೇ ಉತ್ತಮವಾಗಿರಲಿಲ್ಲ.