ಐಪಿಎಲ್: ತವರಿನಲ್ಲೇ ಮುಗ್ಗರಿಸಿದ ಡೆಲ್ಲಿ ಕ್ಯಾಪಿಟಲ್ಸ್

ನವದೆಹಲಿ| Krishnaveni K| Last Modified ಶುಕ್ರವಾರ, 5 ಏಪ್ರಿಲ್ 2019 (09:11 IST)
ನವದೆಹಲಿ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ತವರಿನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳ ಸೋಲು ಅನುಭವಿಸಿದೆ.
 
ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠ ಆಟಗಾರರನ್ನೇ ಹೊಂದಿರುವ ಡೆಲ್ಲಿ ತಂಡ ನಿನ್ನೆಯ ಪಂದ್ಯದಲ್ಲಿ ತೀರಾ ಪೇಲವವಾಗಿ ಆಡಿ ಸೋತಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 129 ರನ್ ಗಳಿಸಲಷ್ಟೇ ಶಕ್ತವಾಗಿದೆ. ಅದರಲ್ಲೂ ನಾಯಕ ಶ್ರೇಯಸ್ ಅಯ್ಯರ್ 43 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಆಟ ಬರಲಿಲ್ಲ.
 
ಈ ಗುರಿ ಬೆನ್ನತ್ತದ ಹೈದರಾಬಾದ್ ಉತ್ತಮ ಆರಂಭ ಪಡೆಯಿತು. ಆರಂಭಿಕ ಜಾನಿ ಬೇರ್ ಸ್ಟೋ  48 ರನ್ ಗಳಿಸಿದರು. ಅಂತಿಮವಾಗಿ ಹೈದರಾಬಾದ್ 18.3 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿ ಗೆಲುವಿನ ನಗೆ ಬೀರಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :