ಚೆನ್ನೈ: ನಿನ್ನೆ ನಡೆದ ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಗೇರಿದೆ.ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ಧೋನಿ 37, ಅಂಬಟಿ ರಾಯುಡು 42 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈಗೆ ಸೂರ್ಯಕುಮಾರ್ ಯಾದವ್ ಆಸರೆಯಾದರು.