ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ 40 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೊತ್ತವನ್ನು ಹೈದರಾಬಾದ್ ಸುಲಭವಾಗಿ ಬೆನ್ನಟ್ಟಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು.ಆದರೆ ಮುಂಬೈ ಇಂಡಿಯನ್ಸ್ ಪರ ಬೌಲಿಂಗ್ ಮಾಡಿದ ಅಲ್ಝಾರಿ ಜೋಸೆಫ್ ದಾಖಲೆಯ ಬೌಲಿಂಗ್ ಮಾಡಿ ಎದುರಾಳಿಗಳನ್ನು