Widgets Magazine

ಐಪಿಎಲ್: ಊಟಕ್ಕಿಲ್ಲದ ಉಪ್ಪಿನಕಾಯಿ ಆಯ್ತು ಸಂಜು ಸ್ಯಾಮ್ಸನ್ ಶತಕ

ಹೈದರಾಬಾದ್| Krishnaveni K| Last Modified ಶನಿವಾರ, 30 ಮಾರ್ಚ್ 2019 (08:25 IST)
ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಪೋಟಕ ಶತಕದ ಹೊರತಾಗಿಯೂ ರಾಜಸ್ಥಾನ್ ರಾಯಲ್ಸ್ ಸೋಲುಂಡಿದೆ.
 
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಸಂಜು ಸ್ಯಾಮ್ಸನ್ 55 ಎಸೆತಗಳಲ್ಲಿ 10 ಬೌಂಡರಿ, 4 ಸಿಕ್ಸರ್ ಸೇರಿದಂತೆ 102 ರನ್ ಚಚ್ಚಿದರು. ನಾಯಕಅಜಿಂಕ್ಯಾ ರೆಹಾನೆ 70 ರನ್ ಗಳಿಸಿ ಉತ್ತಮ ಸಾಥ್ ನೀಡಿದರು.
 
ಆದರೆ ಈ ಬೃಹತ್ ಮೊತ್ತ ಬೆನ್ನತ್ತಿದ ಹೈದರಾಬಾದ್ 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ಬಾರಿಸಿ ಗೆಲುವಿನ ನಗೆ ಬೀರಿತು. ಹೈದರಾಬಾದ್ ಪರ ಡೇವಿಡ್ ವಾರ್ನರ್ 37 ಎಸೆತಗಳಲ್ಲಿ 69, ಜಾನಿ ಬೇರ್ ಸ್ಟೋ 45 ಮತ್ತು ವಿಜಯ್ ಶಂಕರ್ 35 ರನ್ ಗಳಿಸಿದರು. ಇದರೊಂದಿಗೆ ರಾಜಸ್ಥಾನ್ ಕೂಟದಲ್ಲಿ ಎರಡನೇ ಸೋಲುಂಡಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :