Widgets Magazine

ಐಪಿಎಲ್: ದಿನೇಶ್ ಕಾರ್ತಿಕ್ ಹೆಣಗಾಡಿದರೂ ಗೆಲ್ಲದ ಕೆಕೆಆರ್

ಕೋಲ್ಕೊತ್ತಾ| Krishnaveni K| Last Modified ಶುಕ್ರವಾರ, 26 ಏಪ್ರಿಲ್ 2019 (07:32 IST)
ಕೋಲ್ಕೊತ್ತಾ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ 3 ವಿಕೆಟ್ ಗಳ ಗೆಲುವು ದಾಖಲಿಸಿದೆ.
 
ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ದಿನೇಶ್ ಕಾರ್ತಿಕ್ ಅವರ ಬ್ಯಾಟಿಂಗ್ ಅಬ್ಬರದಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ಕಾರ್ತಿಕ್ 50 ಎಸೆತಗಳಲ್ಲಿ 97 ರನ್ ಗಳಿಸಿದರು. ಸತತ ವೈಫಲ್ಯದಿಂದ ಕಂಗೆಟ್ಟಿದ್ದ ಕಾರ್ತಿಕ್ ಈ ರೀತಿ ಫಾರ್ಮ್ ಗೆ ಮರಳಿದರೂ ಗೆಲುವು ಮಾತ್ರ ಮರೀಚಿಕೆಯಾಯಿತು.
 
ಗೆಲುವಿನ ಗುರಿ ಬೆನ್ನತ್ತಿದ್ದ ರಾಜಸ್ಥಾನ್ 19.2 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು. ರಾಜಸ್ಥಾನ್ ಪರ ರಿಯಾನ್ ಪರಾಗ್ 47, ಅಜಿಂಕ್ಯಾ ರೆಹಾನೆ 34 ಮತ್ತು ಜೋಫ್ರಾ ಆರ್ಚರ್ 27 ರನ್ ಗಳಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ


ಇದರಲ್ಲಿ ಇನ್ನಷ್ಟು ಓದಿ :