Widgets Magazine

ಐಪಿಎಲ್: ಧೋನಿ ಪಡೆಗೆ ಶಾಕ್ ಕೊಟ್ಟ ಹೈದರಾಬಾದ್

ಹೈದರಾಬಾದ್| Krishnaveni K| Last Modified ಗುರುವಾರ, 18 ಏಪ್ರಿಲ್ 2019 (07:20 IST)
ಹೈದರಾಬಾದ್: ಈ ಐಪಿಎಲ್ ಆವೃತ್ತಿಯಲ್ಲಿ ಸೋಲರಿಯದ ಸರದಾರನಂತೆ ಓಡುತ್ತಿರುವ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಎರಡನೇ ಸೋಲು ಸಿಕ್ಕಿದೆ.
 
ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಸಿಎಸ್ ಕೆ ತಂಡವನ್ನು ರೋಚಕವಾಗಿ 6 ವಿಕೆಟ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಯಿತು.
 
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ 16.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಹೈದರಾಬಾದ್ ಪರ ಜಾನಿ ಬೇರ್ ಸ್ಟೋ 44 ಎಸೆತಗಳಲ್ಲಿ 61 ರನ್ ಗಳಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       
ಇದರಲ್ಲಿ ಇನ್ನಷ್ಟು ಓದಿ :