ಹೈದರಾಬಾದ್: ಟಿ20 ಕ್ರಿಕೆಟ್ ಎಂದರೆ ರೋಚಕತೆಗೆ ಇನ್ನೊಂದು ಹೆಸರು. ನಿನ್ನೆ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಐಪಿಎಲ್ ಫೈನಲ್ ಪಂದ್ಯ ಅದನ್ನು ನಿಜ ಮಾಡಿದೆ.ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 149 ರನ್ ಗಳಿಸಲಷ್ಟೇ ಶಕ್ತವಾಯಿತು. ಟಿ20 ಕ್ರಿಕೆಟ್ ನಲ್ಲಿ ಇದು ದೊಡ್ಡ ಮೊತ್ತವೇನೂ ಅಲ್ಲ. ಹೀಗಾಗಿ ಚೆನ್ನೈ ಸುಲಭವಾಗಿ ಗೆಲ್ಲಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು.ಆದರೆ