ಮುಂಬೈ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಪ್ರಕಟವಾದ ಬೆನ್ನಲ್ಲೇ ಅಪಸ್ವರಗಳೂ ಕೇಳಿಬಂದಿದೆ. ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಬಹಿರಂಗವಾಗಿಯೇ ಕಿಡಿ ಕಾರಿದ್ದಾರೆ.ಮುಂಬೈ ಇಂಡಿಯನ್ಸ್ ಪರ ಆಡುವ ಸೂರ್ಯಕುಮಾರ್ ಯಾದವ್ ಐಪಿಎಲ್ ನಲ್ಲಿ ಮಾತ್ರವಲ್ಲ, ದೇಶೀಯ ಕ್ರಿಕೆಟ್ ನಲ್ಲೂ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹಾಗಿದ್ದರೂ ಅವರನ್ನು ತಂಡಕ್ಕೆ ಆಯ್ಕೆ ಮಾಡದೇ ಇರುವುದಕ್ಕೆ ಭಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೂರ್ಯಕುಮಾರ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗಬೇಕಾದರೆ ಇನ್ನೂ