ದುಬೈ: ಈ ಬಾರಿಯ ಐಪಿಎಲ್ ಕೂಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ದುರಾದೃಷ್ಟ ಮುಂದುವರಿದಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 7 ರನ್ ಗಳ ಸೋಲುಂಡಿದೆ. ಇದರೊಂದಿಗೆ ಹ್ಯಾಟ್ರಿಕ್ ಸೋಲಿನ ಅವಮಾನಕ್ಕೀಡಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಮಧ್ಯಮ ಕ್ರಮಾಂಕದಲ್ಲಿ ಯುವ ಬ್ಯಾಟ್ಸ್ ಮನ್ ಪ್ರಿಯಂ ಗರ್ಗ್ ಅತ್ಯುತ್ತಮ ಆಟದ ನೆರವಿನಿಂದ (51 ನಾಟೌಟ್) ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 165 ರನ್