ದುಬೈ: ಐಪಿಎಲ್ 13 ರಲ್ಲಿ ಇಂದು ಬಹುನಿರೀಕ್ಷಿತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಎರಡೂ ತಂಡಗಳು ಅಂಕಪಟ್ಟಿಯಲ್ಲಿ ಯಾವುದೇ ಸ್ಥಾನದಲ್ಲಿರಲಿ, ಆದರೆ ಧೋನಿ ಮತ್ತು ವಿರಾಟ್ ಕೊಹ್ಲಿ ನಡುವಿನ ಕಾಳಗ ಎಂದರೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚೇ ಇರುತ್ತದೆ. ಈಗಾಗಲೇ ಸತತ ಪಂದ್ಯಗಳನ್ನು ಗೆದ್ದುಕೊಂಡಿರುವ ಆರ್ ಸಿಬಿ ಸೋಲಿನ ಸುಳಿಯಲ್ಲಿರುವ ಚೆನ್ನೈಯನ್ನು ಸುಲಭವಾಗಿ ಮಣಿಸುವ