ದುಬೈ: ಐಪಿಎಲ್ 13 ರಲ್ಲಿ ಯಾಕೋ ಕಿಂಗ್ಸ್ ಇಲೆವೆನ್ ಪಂಜಾಬ್ ಸೋಲಿನ ಸರಪಳಿಯಿಂದ ಹೊರಬರುವ ಲಕ್ಷಣ ಕಾಣುತ್ತಿಲ್ಲ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 69 ರನ್ ಗಳ ಹೀನಾಯ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಆರಂಭಿಕ ಡೇವಿಡ್ ವಾರ್ನರ್ (52) ಮತ್ತು ಜಾನಿ ಬೇರ್ ಸ್ಟೋ (97) ಭರ್ಜರಿ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು.