ದುಬೈ: ಮಹತ್ವದ ಸಂದರ್ಭದಲ್ಲಿಯೇ ಕಿಂಗ್ಸ್ ಇಲೆವೆನ್ ಪಂಜಾಬ್ ಹಳಿಗೆ ಬಂದಿದೆ. ನಿನ್ನೆ ಕೆಕೆಆರ್ ವಿರುದ್ಧ ನಡೆದ ಮಹತ್ವದ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರ ನಾಲ್ಕರೊಳಗೆ ಸ್ಥಾನ ಸಂಪಾದಿಸಿದೆ. ನಿನ್ನೆಯ ಪಂದ್ಯದಲ್ಲಿ ಪಂಜಾಬ್ 8 ವಿಕೆಟ್ ಗಳ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಂಜಾಬ್ ಮನ್ ದೀಪ್ ಸಿಂಗ್