ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ದಾಖಲೆಯ 223 ರನ್ ಗಳ ರನ್ ಚೇಸ್ ಮಾಡಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್, ನಾಯಕ ಕೆಎಲ್ ರಾಹುಲ್-ಮಯಾಂಕ್ ಅಗರ್ವಾಲ್ ಭರ್ಜರಿ ಓಪನಿಂಗ್ ಜತೆಯಾಟದಿಂದಾಗಿ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತು. ರಾಹುಲ್ 54 ಎಸೆತಗಳಲ್ಲಿ 69 ರನ್ ಗಳಿಸಿದರೆ ಮಯಾಂಕ್ 50 ಎಸೆತಗಳಲ್ಲಿ ಬರೋಬ್ಬರಿ