ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಪವರ್ ಏನೆಂದು ನಿನ್ನೆ ಎಲ್ಲಾ ತಂಡಗಳಿಗೂ ಮನವರಿಕೆಯಾಗಿರುತ್ತದೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್ ಮತ್ತು ಬ್ಯಾಟಿಂಗ್ ನಲ್ಲಿ ದೇವದತ್ತ್ ಪಡಿಕ್ಕಲ್ ಮನೋಹರ ಹೊಡೆತಗಳ ಮೂಲಕ ಕೆಕೆಆರ್ ವಿರುದ್ಧದ ಪಂದ್ಯವನ್ನು ಚಿಂದಿ ಉಡಾಯಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾಗೆ 35 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಹೀನಾಯ ಸ್ಥಿತಿಯಲ್ಲಿತ್ತು. ಆದರೆ ಈ ಹಂತದಲ್ಲಿ ನಾಯಕ ಇಯಾನ್ ಮಾರ್ಗನ್ 30 ರನ್ ಗಳಿಸಿ