ದುಬೈ: ಐಪಿಎಲ್ 13 ರ ಚಾಂಪಿಯನ್ ಶಿಪ್ ಮುಂಬೈ ಇಂಡಿಯನ್ಸ್ ಪಾಲಾಗಿದೆ. ಈ ಮೂಲಕ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಪಂದ್ಯವನ್ನು 5 ವಿಕೆಟ್ ಗಳ ಅಂತರದಿಂದ ಗೆದ್ದುಕೊಂಡ ಮುಂಬೈ ಐಪಿಎಲ್ ನಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು