ಐಪಿಎಲ್ 14: ಅರ್ಜುನ್ ತೆಂಡುಲ್ಕರ್ ಮುಂಬೈ ಪಾಲು

ಮುಂಬೈ| Krishnaveni K| Last Modified ಶುಕ್ರವಾರ, 19 ಫೆಬ್ರವರಿ 2021 (09:09 IST)
ಮುಂಬೈ: ಕ್ಕೆ ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದಾರೆ.

 
ಅರ್ಜುನ್ ಕೂಡಾ ಹರಾಜು ಪ್ರಕ್ರಿಯೆಯಲ್ಲಿ ನೊಂದಾಯಿಸಿಕೊಂಡಿದ್ದರು. ಆದರೆ ಯಾವ ತಂಡವೂ ಅವರನ್ನು ಖರೀದಿಸಿರಲಿಲ್ಲ. ಕೊನೆಗೆ ಮುಂಬೈ ಇಂಡಿಯನ್ಸ್ ಅರ್ಜುನ್ ಮೂಲ ಬೆಲೆ 20 ಲಕ್ಷ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತು. ಅರ್ಜುನ್ ಎಡಗೈ ಬ್ಯಾಟಿಂಗ್ ಮತ್ತು ವೇಗದ ಬೌಲಿಂಗ್ ಮಾಡಬಲ್ಲರು. ವಿಶೇಷವೆಂದರೆ ಹರಾಜಿಗೂ ಮೊದಲೇ ಹಲವರು ಅರ್ಜುನ್ ರನ್ನು ಮುಂಬೈ ಇಂಡಿಯನ್ಸ್ ತಂಡವೇ ಖರೀದಿ ಮಾಡಲಿದೆ ಎಂದು ಟ್ರೋಲ್ ಮಾಡಿದ್ದರು. ಕೊನೆಗೂ ಟ್ರೋಲಿಗರ ಭವಿಷ್ಯ ನಿಜವಾಯಿತು.
ಇದರಲ್ಲಿ ಇನ್ನಷ್ಟು ಓದಿ :