ದುಬೈ: ಐಪಿಎಲ್ 14 ರ ಎರಡನೇ ಭಾಗದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಕುಸಿತ ಅನುಭವಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ಇತ್ತೀಚೆಗಿನ ವರದಿ ಬಂದಾಗ 12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ.ಫಾ ಡು ಪ್ಲೆಸಿಸ್, ಮೊಯಿನ್ ಅಲಿ ಶೂನ್ಯಕ್ಕೆ ನಿರ್ಗಮಿಸಿದರೆ ಅಂಬಟಿ ರಾಯುಡು ಖಾತೆ ತೆರೆಯುವ ಮೊದಲೇ ಗಾಯಗೊಂಡು ಪೆವಿಲಿಯನ್ ಸೇರಿಕೊಂಡರು.