ಚೆನ್ನೈ: ಮ್ಯಾಚ್ ಫಿಕ್ಸಿಂಗ್ ಕಳಂಕದ ನಿಷೇಧ ಶಿಕ್ಷೆ ಮುಗಿಸಿ ಈ ಬಾರಿಯ ಐಪಿಎಲ್ ಆವೃತ್ತಿಗೆ ಮರಳುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭಿಮಾನಿಗಳ ಒತ್ತಡಕ್ಕೆ ತಲೆ ಬಾಗಿದೆ. ಕಳೆದ ಕೆಲವು ದಿನಗಳಿಂದ ಸುರೇಶ್ ರೈನಾರನ್ನು ತಂಡದಲ್ಲಿ ಉಳಿಸಿಕೊಳ್ಳುವ ಯೋಜನೆ ಸಿಎಸ್ ಕೆಗೆ ಇಲ್ಲ ಎಂಬ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ರೈನಾ ಇಲ್ಲದೆ ಸಿಎಸ್ ಕೆ ಇಲ್ಲ ಎಂದು ಅಭಿಮಾನಿಗಳು ಟ್ವಿಟರ್ ನಲ್ಲಿ ಒತ್ತಾಯ