ಮುಂಬೈ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಇಂದು ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗುತ್ತಿದ್ದಾರೆ.ಎಂಎಸ್ಡಿ CSK ನಾಯಕತ್ವಕ್ಕೆ ಮರಳುತ್ತಿದ್ದಂತೆ ಜಯದ ಹಾದಿ ಹಿಡಿದಿರುವ ಚೆನ್ನೈ ಕಳೆದ ವಾರ ಹೈದ್ರಾಬಾದ್ ತಂಡದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಕಳೆದ 9 ಪಂದ್ಯಗಳಲ್ಲಿ ಸಿಎಸ್ಕೆ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದು, ಐಪಿಎಲ್ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ.ಹಾಗೆಯೇ ಸತತ 2 ಪಂದ್ಯಗಳಲ್ಲಿ ಸೋಲು ಕಂಡಿರುವ ಆರ್ಸಿಬಿ ಹ್ಯಾಟ್ರಿಕ್ ಸೋಲಿನಿಂದ ತಪ್ಪಿಸಿಕೊಳ್ಳುವ ತವಕದಲ್ಲಿದೆ.