ದುಬೈ: ಐಪಿಎಲ್ 14 ರ ಇಂದಿನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿಗೆ 135 ರನ್ ಗಳ ಸಾಧಾರಣ ಗುರಿ ನೀಡಿದೆ.ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ದುಕೊಂಡಿತು. ಅದಕ್ಕೆ ತಕ್ಕಂತೇ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಕೀಳುತ್ತಾ ಚೆನ್ನೈ ರನ್ ಗೆ ಕಡಿವಾಣ ಹಾಕಿದರು. ಆರಂಭಿಕ ಫಾ ಡು ಪ್ಲೆಸಿಸ್ 76 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವ ರನ್ ಬರಲಿಲ್ಲ.