ದುಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕ 3 ವಿಕೆಟ್ ಗಳ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದೊಂದಿಗೆ ಪ್ಲೇ ಆಫ್ ಹಂತಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಅಂಬಟಿ ರಾಯುಡು ಅಜೇಯ 55 ರನ್ ಗಳಿಸಿದರು. ಧೋನಿ ಮತ್ತೆ ನಿಧಾನಗತಿಯ ಬ್ಯಾಟಿಂಗ್ ಮಾಡಿ 27 ಎಸೆತಗಳಿಂದ 18 ರನ್ ಗಳಿಸಿದರು.