ದುಬೈ: ಐಪಿಎಲ್ 14 ರ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 3 ವಿಕೆಟ್ ಗಳಿಂದ ಮಣಿಸಿದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಗೆ ಲಗ್ಗೆಯಿಟ್ಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು. ಈ ಸಾಧಾರಣ ಮೊತ್ತ ಕೆಕೆಆರ್ ಗೆ ಸುಲಭ ತುತ್ತಾಗಬಹುದು ಎಂದೇ ಎಲ್ಲರ ನಿರೀಕ್ಷೆಯಾಗಿತ್ತು.ಆದರೆ ಕೆಕೆಆರ್ ಗೂ ಅಷ್ಟು ಸುಲಭವಾಗಿ ಜಯ ದೊರಕಲಿಲ್ಲ.