ಮುಂಬೈ: ಐಪಿಎಲ್ 14 ರಲ್ಲಿ ಕಳೆದ ಕೆಲವು ಪಂದ್ಯಗಳಿಂದ ಮಂಕಾಗಿದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕೊನೆಗೂ ಗೆಲುವಿನ ಹಳಿಗೆ ಮರಳಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಸಂಜು ಸ್ಯಾಮ್ಸನ್ 42, ಜೋಸ್ ಬಟ್ಲರ್ 41, ಶಿವಂ ದುಬೆ 35 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್