ದುಬೈ: ಐಪಿಎಲ್ 14 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮತ್ತೊಂದು ಲೀಗ್ ಪಂದ್ಯವಾಡಲಿದೆ.ಈ ಪಂದ್ಯ ಆರ್ ಸಿಬಿ ಪಾಲಿಗೆ ಔಪಚಾರಿಕವಾಗಲಿದೆ. ಈಗಾಗಲೇ ಮೂರನೇ ತಂಡವಾಗಿ ಪ್ಲೇ ಆಫ್ ಹಂತಕ್ಕೇರಿರುವ ಆರ್ ಸಿಬಿಗೆ ಈ ಪಂದ್ಯದ ಫಲಿತಾಂಶ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.ಅತ್ತ ಸನ್ ರೈಸರ್ಸ್ ಹೈದರಾಬಾದ್ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ.