ಮುಂಬೈ: ಐಪಿಎಲ್ 2022 ರಲ್ಲಿ ಇಂದಿನಿಂದ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭವಾಗುತ್ತಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಮತ್ತು ರಾಜಸ್ಥಾನ್ ತಂಡಗಳು ಮುಖಾಮುಖಿಯಾಗಲಿವೆ.ಲೀಗ್ ಪಂದ್ಯಗಳ ಪ್ರದರ್ಶನ ಆಧರಿಸಿ ಹೇಳುವುದಾದರೆ ಗುಜರಾತ್ ಟೈಟನ್ಸ್ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್ ಇದುವರೆಗೆ ಉತ್ತಮ ಪ್ರದರ್ಶನವನ್ನೇ ನೀಡುತ್ತಾ ಬಂದಿದ್ದಾರೆ. ಅಲ್ಲದೆ ರಾಹುಲ್ ತೆವಾತಿಯಾ ಕೂಡಾ ಫಿನಿಶರ್ ರೋಲ್ ಚೆನ್ನಾಗಿ ನಿಭಾಯಿಸುತ್ತಿದ್ದಾರೆ. ಬೌಲಿಂಗ್ ನಲ್ಲೂ ರಶೀದ್ ಖಾನ್, ಮೊಹಮ್ಮದ್ ಶಮಿ