ಕೋಲ್ಕೊತ್ತಾ: ಐಪಿಎಲ್ 2022 ರ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ವಿರುದ್ಧ ರೋಚಕ 14 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಅಗತ್ಯ ಸಂದರ್ಭದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ರಜತ್ ಪಾಟೀದಾರ್ ಕೇವಲ 54 ಎಸೆತಗಳಲ್ಲಿ 7 ಸಿಕ್ಸರ್ ಗಳೊಂದಿಗೆ 112 ರನ್ ಚಚ್ಚಿದರು.