ಮುಂಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿದ್ದ ಮೈಕ್ ಹಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಸನ್ ಈಗ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಕೋಚ್ ಹುದ್ದೆ ಆಕಾಂಕ್ಷಿಯಾಗಿದ್ದಾರೆ.ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದವರ ಪೈಕಿ ಮೈಕ್ ಹಸನ್ ಕೂಡಾ ಒಬ್ಬರು. ಟೀಂ ಇಂಡಿಯಾಗೆ ಕೋಚ್ ಆಗಬೇಕಾದರೆ ಐಪಿಎಲ್ ನ ಯಾವುದೇ ತಂಡದ ಜತೆಗೆ ಕೆಲಸ ಮಾಡುತ್ತಿರಬಾರದು. ಹೀಗಾಗಿಯೇ ಮೈಕ್ ಪಂಜಾಬ್ ತಂಡಕ್ಕೆ ರಾಜೀನಾಮೆ ನೀಡಿದ್ದಾರೆ