ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಪಂದ್ಯ ಸೋತಿರುವ ಆರ್`ಸಿಬಿ ಈ ಪಂದ್ಯ ಗೆದ್ದು ಸರಣಿಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕಿದೆ. 360 ಡಿಗ್ರಿ ಆಟಗಾರ ಎ ಬಿ ಡಿವಿಲಿಯರ್ಸ್ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಹೀಗಾಗಿ, ವ್ಯಾಟ್ಸನ್ ಪಡೆ ನಿಟ್ಟುಸಿರುಬಿಡುವಂತಾಗಿದೆ. ಕ್ರಿಸ್ ಗೇಲ್ ಮತ್ತು ಡಿವಿಲಿಯರ್ಸ್ ಮೇಲೆ ಹೆಚ್ಚಿನ ನಿರೀಕ್ಷೆ ಇದ್ದು, ಇವರಿಬ್ಬರು ಸಿಡಿದರೆ ಎದುರಾಳಿ