ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಪರ್ವ ಮುಂದುವರಿದಿದ್ದು, 7,000 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಅಮೆರಿಕದ ಮನರಂಜನಾ ಮಾಧ್ಯಮ ವಾಲ್ಟ್ ಡಿಸ್ನಿ ಘೋಷಿಸಿದೆ. ಬಾಬ್ ಐಗರ್ ಕಂಪನಿಯ CEO ಆಗಿ ಅಧಿಕಾರ ಸ್ವೀಕರಿಸಿದ ನಂತರ ಕೈಗೊಂಡ ಮಹತ್ವದ ಕ್ರಮ ಇದಾಗಿದೆ. ಅಮೆರಿಕದ ಅನೇಕ ತಂತ್ರಜ್ಞಾನ ಕಂಪನಿಗಳು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿವೆ. ಇದೀಗ ಇತರ ಕ್ಷೇತ್ರಗಳಲ್ಲೂ ಉದ್ಯೋಗ ಕಡಿತ ಆರಂಭವಾಗಿದೆ. ಆರ್ಥಿಕ ಅನಿಶ್ಚಿತತೆ, ಲಾಭ ಕುಸಿತ ಮತ್ತಿತರ ಕಾರಣಗಳಿಂದ