ಮುಂಬರುವ ನವೆಂಬರ್ ತಿಂಗಳಿನಿಂದ ಎಲ್ಪಿಜಿ ಸಬ್ಸಿಡಿ ಪಡೆಯಲು ಆಧಾರ ಕಾರ್ಡ್ ಕಡ್ಡಾಯಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಕೇಂದ್ರ ಸರಕಾರ ಪ್ರಸ್ತುತ ಕುಟುಂಬವೊಂದಕ್ಕೆ ಪ್ರತಿ ವರ್ಷಕ್ಕೆ 12 ಸಿಲಿಂಡರ್ಗಳನ್ನು ಸಬ್ಸಿಡಿ ದರದಲ್ಲಿ ನೀಡುತ್ತಿದೆ. ಸಬ್ಸಿಡಿ ಮೊತ್ತವನ್ನು ಸರಕಾರ ನೇರವಾಗಿ ಫಲಾನುಭಿ ಖಾತೆಗೆ ಜಮಾ ಮಾಡುತ್ತದೆ. ನವೆಂಬರ್ ತಿಂಗಳಿನಿಂದ ಎಲ್ಪಿಜಿ ಸಬ್ಸಿಡಿ ಪಡೆಯಬೇಕಾದವರು ಆಧಾರ ಕಾರ್ಡ್ ಕಡ್ಡಾಯವಾಗಿ ನೀಡಲೇಬೇಕಾಗುತ್ತದೆ. ಇಲ್ಲವಾದಲ್ಲಿ ಗ್ರಾಹಕರು ಎಲ್ಪಿಜಿ ಸಿಲಿಂಡರ್ನ್ನು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಾದ