ಒಂದು ಮನೆ ಕಟ್ಟಬೇಕಾದರೂ ತಿಂಗಳುಗಟ್ಟಲೆ ಬಿಲ್ಡಿಂಗ್ ಪ್ಲಾನ್ಗಾಗಿ ಕಾಯುವ ಕಾಲಕ್ಕೆ ಕೊನೆಗೂ ವಿದಾಯ ಹೇಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಡೀ ಪ್ರಕ್ರಿಯೆಯನ್ನು ಇಂಜಿಯರ್ಗಳಿರುವ ವೃತ್ತಿಪರ ಸಮಿತಿಗೆ ಹೊರ ಗುತ್ತಿಗೆ ನೀಡುವ ಮೂಲಕ ವಾರದೊಳಗೆ ಮನೆಗೆ ಬಿಲ್ಡಿಂಗ್ ಪ್ಲಾನ್ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ಮನೆ ಸೇರಿದಂತೆ ಕಟ್ಟಡ ನಿರ್ಮಾಣ ಕ್ಷೇತ್ರ ಅದರಲ್ಲೂ ಮಧ್ಯಮ ವರ್ಗದವರು ಬೆಚ್ಚಿಬೀಳುವುದು ಸರ್ಕಾರದ ಕೆಂಪು ಪಟ್ಟಿಯ ವಿಳಂಬ ನೀತಿಯಿಂದ ಎಂದರೆ ಅತಿಶಯೋಕ್ತಿ ಆಗುವುದಿಲ್ಲ. ಈ