ಮುಂಬೈ ಕೋರ್ಟ್ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ, ಲಂಡನ್ ಸರಕಾರಕ್ಕೆ ಮನವಿ ಸಲ್ಲಿಸಿದ ಸಿಬಿಐ ಆರೋಪಿಯನ್ನು ವಶಕ್ಕೆ ನೀಡುವಂತೆ ಕೋರಿದೆ. ಕೇಂದ್ರ ಸರಕಾರ ಇಂಗ್ಲೆಂಡ್ ಪ್ರಧಾನಿ ಥೇರೆಸಾ ಮೇ ಅವರೊಂದಿಗೆ ಚರ್ಚೆ ನಡೆಸಿದ್ದು, ಮಾರ್ಚ್ 2 ರಂದು ಲಂಡನ್ಗೆ ಪರಾರಿಯಾಗಿರುವ ಮಲ್ಯ ಅವರನ್ನು ವಶಕ್ಕೆ ನೀಡುವಂತೆ ಮನವಿ ಮಾಡಿದೆ. ಮುಂಬೈನ ವಿಶೇಷ ನ್ಯಾಯಾಲಯದಿಂದ ಮಲ್ಯರನ್ನು ವಶಕ್ಕೆ ತೆಗೆದುಕೊಳ್ಳುವ ಬಗ್ಗೆ ಅನುಮತಿ ಪಡೆದಿರುವ