Widgets Magazine

ನಾಳೆ ಎಲ್ಲೆಲ್ಲಿ ಪೆಟ್ರೋಲ್ ಬಂಕ್ ಬಂದ್ ಗೊತ್ತಾ?

petrol
ಮೈಸೂರು| Rajesh patil| Last Updated: ಗುರುವಾರ, 15 ಜೂನ್ 2017 (16:15 IST)
ಕೇಂದ್ರ ಸರಕಾರದ ಪ್ರತಿದಿನ ಪೆಟ್ರೋಲ್ ದರ ಪರಿಷ್ಕರಣೆ ವಿರೋಧಿಸಿ ನಾಳೆ ಮೈಸೂರು ವಿಭಾಗದಲ್ಲಿ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಮೈಸೂರು ಬಂಕ್ ಮಾಲೀಕರ ಸಂಘ ತಿಳಿಸಿದೆ.

ಮೈಸೂರು ನಗರದಲ್ಲಿ ನಡೆದ ಪೆಟ್ರೋಲ್ ಮಾಲೀಕರ ಸಂಘ ಇಂದು ನಡೆದ ಸಭೆಯಲ್ಲಿ ನಾಳೆ ಪೆಟ್ರೋಲ್ ಬಂಕ್ ಬಂದ್ ಮಾಡುವ ತೀರ್ಮಾನ ತೆಗೆದುಕೊಂಡಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಹೆಗಡೆ ತಿಳಿಸಿದ್ದಾರೆ.

ಇಂದು ರಾತ್ರಿ 12 ರಿಂದ ನಾಳೆ ಮಧ್ಯ ರಾತ್ರಿ 12 ಗಂಟೆಯವರೆಗೆ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಮೈಸೂರು, ಹಾಸನ, ರಾಮನಗರ, ಕೊಡಗು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್‌ಗಳು ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಮೈಸೂರು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಹೆಗ್ಡೆ ಮಾಹಿತಿ ನೀಡಿದ್ದಾರೆ.


ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..

//kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :