ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಇಳಿಕೆ ಮಾಡಿದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿನಿತ್ಯ ಕೊಂಚ ಮಟ್ಟಿಗೆ ಇಳಿಕೆಯಾಗುತ್ತಿದೆ.ಕಳೆದ 12 ದಿನಗಳಿಂದ ಪ್ರತಿನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸಣ್ಣ ಪ್ರಮಾಣದ ಇಳಿಕೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 79.75 ರೂ.ಗೆ ಬಂದು ನಿಂತಿದೆ. ಬೆಲೆ ಏರಿಕೆಯಾಗುತ್ತಿದ್ದ ದಿನಗಳಲ್ಲಿ ಇದು 90 ರೂ. ವರೆಗೂ ಬಂದು ತಲುಪಿತ್ತು. ಡೀಸೆಲ್ ಬೆಲೆ 73.85 ರೂ.ಗೆ ಇಳಿಕೆಯಾಗಿದೆ.ವಾಣಿಜ್ಯ