ದಿನ ದಿನಕ್ಕೂ ಆರ್ಥಿಕ ಹಿಂಜರಿತ, ಉದ್ಯೋಗ ಕಡಿತದ ಭಯ ಹೆಚ್ಚಾಗುತ್ತಿರುವ ನಡುವೆಯೇ ಫೇಸ್ಬುಕ್, ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ನ ಮಾತೃಸಂಸ್ಥೆ ಮೆಟಾ ಪ್ಲಾಟ್ಫಾರ್ಮ್ಸ್ ಇಂಕ್ ಹೊಸದಾಗಿ ಉದ್ಯೋಗಿಗಳ ವಜಾಕ್ಕೆ ಮುಂದಾಗಿದೆ. ಈ ವಾರದಲ್ಲಿ ಸಾವಿರಾರು ಉದ್ಯೋಗಿಗಳನ್ನು ಸಂಸ್ಥೆ ವಜಾಗೊಳಿಸಲಿದೆ ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ. ವಿಶ್ವದ ಅತಿದೊಡ್ಡ ಸಾಮಾಜಿಕ ಜಾಲತಾಣ ಸಂಸ್ಥೆಯು ಈ ಹಿಂದೆ ನವೆಂಬರ್ನಲ್ಲಿ ಶೇ. 13ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದೀಗ ಕಂಪನಿಯು ಹೆಚ್ಚು ದಕ್ಷ ಸಂಸ್ಥೆಯಾಗಲು