ಬೆಂಗಳೂರು : ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಇನ್ನೂ ಕೆಲವರು ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಿಲ್ಲ. ಆದ್ದರಿಂದ ಅಂತವರು ಮೊದಲು ಅದರಿಂದ ಆಗೋ ಪ್ರಯೋಜನಗಳೇನು ಎಂಬುದು ತಿಳಿದುಕೊಳ್ಳಿ. ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡುವುದರಿಂದ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕಾರ್ಡ್ ಹೊಂದುವುದನ್ನು ತಡೆಯಬಹುದು. ತೆರಿಗೆ ವಂಚಕರನ್ನು ಪತ್ತೆ ಮಾಡಲು ಆದಾಯ ತೆರಿಗೆ ಇಲಾಖೆಗೆ ಸಹಾಯವಾಗುತ್ತದೆ.