ಮಹಾರಾಷ್ಟ್ರ : ಧರ್ಮಗ್ರಂಥ, ಧಾರ್ಮಿಕ ಪತ್ರಿಕೆ, ನಿಯತಕಾಲಿಕೆ, ಡಿವಿಡಿ ಮಾರಾಟ ಒಂದು ವ್ಯಾಪಾರವಾಗಿದ್ದು, ಇವುಗಳು ಜಿ.ಎಸ್.ಟಿ. ಅಡಿಯಲ್ಲಿ ಬರಬೇಕೆಂದು ಮಹಾರಾಷ್ಟ್ರ ಜಿ.ಎಸ್.ಟಿ. ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಮದ್ ರಾಮಚಂದ್ರ ಆಧ್ಯಾತ್ಮಿಕ ಸತ್ಸಂಗ ಸಾಧನಾ ಕೇಂದ್ರವು ಮಹಾರಾಷ್ಟ್ರ ಕೋರ್ಟ್ ನಲ್ಲಿ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವುದು ನಮ್ಮ ಕೆಲಸ. ಹಾಗಾಗಿ ಸಂಸ್ಥೆಯನ್ನು ವ್ಯಾಪಾರದ ಅಡಿ ಸೇರಿಸಬಾರದೆಂದು ಅರ್ಜಿ ಸಲ್ಲಿಸುವುದರ ಮೂಲಕ ಮನವಿ ಮಾಡಿದೆ.