ನವದೆಹಲಿ : ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ಸಲುವಾಗಿ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಅದರ ಜೊತೆಗೆ ವಿದ್ಯುತ್ ವಾಹನಗಳಿಗೆ ಸಬ್ಸಿಡಿ ನೀಡುವುದಾಗಿ ಘೋಷಣೆ ಮಾಡಿತ್ತು. ಆದೆರೆ ಇದೀಗ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಾಣಿಜ್ಯ ವಾಹನಗಳಿಗೆ ಮಾತ್ರ ಸಬ್ಸಿಡಿ ನೀಡಲಾಗುವುದು, ಆದರೆ ವೈಯಕ್ತಿಕ ಬಳಕೆಯ ವಾಹನಗಳಿಗೆ ನೀಡಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ವಾಣಿಜ್ಯ ಬಳಕೆಯ ತ್ರಿಚಕ್ರವಾಹನ ಮತ್ತು ನಾಲ್ಕು ಚಕ್ರ ವಾಹನಗಳಿಗೆ ವಿಶೇಷ ಸಬ್ಸಿಡಿ ಅನ್ವಯವಾಗಲಿದ್ದು, ವೈಯಕ್ತಿಕ