Widgets Magazine

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಮುಂಬೈ| venu| Last Modified ಗುರುವಾರ, 1 ಜೂನ್ 2017 (09:55 IST)
ವಾಹನ ಸವಾರರಿಗೆ ತೈಲ ಕಂಪನಿಗಳು ಶಾಕ್ ನೀಡಿವೆ. ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 1.23 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 80 ಪೈಸೆ ಏರಿಕೆಯಾಗಿದೆ. ಈ ಬೆಲೆ ಏರಿಕೆ ರಾಜ್ಯ ತೆರಿಗೆಗಳನ್ನ ಒಳಗೊಂಡಿಲ್ಲವಾದ್ದರಿಂದ ಬೆಲೆ ಏರಿಕೆ ಮತ್ತಷ್ಟು ಹೆಚ್ಚಿರಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಮತ್ತು ಅಮೆರಿಕನ್ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದ ಪರಿಣಾಮದಿಂದಾಗಿ ಬೆಲೆ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಮೇ 16ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ್ದವು. ಪೆಟ್ರೋಲ್ ಬೆಲೆಯಲ್ಲಿ 2.16 ರೂ. ಮತ್ತು ಡೀಸೆಲ್ ಬೆಲೆಯಲ್ಲಿ 2.10 ರೂ. ಇಳಿಕೆ ಮಾಡಲಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :