ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಮುಂದೂಡಲಾಗಿದೆ ಎಂದು ಪೆಟ್ರೋಲ್ ಡೀಲರ್ಸ್ ಅಸೋಸಿಯೇಶನ್ ಅಧ್ಯಕ್ಷ ರವೀಂದ್ರನಾಥ್ ಹೇಳಿದ್ದಾರೆ. ನಾಳೆಯಿಂದ ನಡೆಯಬೇಕಾಗಿದ್ದ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಮೇ 17 ರಂದು ಮುಂಬೈನಲ್ಲಿ ತೈಲ ಕಂಪೆನಿಗಳ ಜೊತೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆ ಕುರಿತಂತೆ ಚರ್ಚಿಸಿದ ನಂತರ,