ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ನಗರದ ಗಾಂಧಿ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ರು..ರಾಜ್ಯ ವಿಧಾನಸಭಾ ಚುನಾವಣೆ ಮುಗಿಯೋವರೆಗೂ ಸುಮ್ಮನಿದ್ದು ಈಗ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.