ಚಾಮರಾಜನಗರ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ, ಚಾಮರಾಜನಗರದಲ್ಲಿ ಪ್ರಗತಿ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಒಂಟಿ ಎತ್ತಿನ ಗಾಡಿ ಮೇಲೆ ಬೈಕ್ ನಿಲ್ಲಿಸಿ, ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರಗತಿಪರ ಸಂಘಟನೆಯ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು,ಪ್ರಧಾನಿ ಮೋದಿ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಪ್ರಗತಿ ಪರ