ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು ಮತ್ತೆ 25 ಮೂಲಾಂಶ ಹೆಚ್ಚಿಸಿದೆ. ಪರಿಷ್ಕೃತ ರೆಪೊ ದರವೀಗ ಶೇ 6.50 ಆಗಿದೆ. ಸೋಮವಾರದಿಂದ ಆರಂಭಗೊಂಡಿದ್ದ ಹಣಕಾಸು ನೀತಿ ಸಮಿತಿಯ ಸಭೆ ಬುಧವಾರ ಕೊನೆಗೊಂಡಿದ್ದು, ನಿರ್ಣಯಗಳನ್ನು ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದರು. ಇದರೊಂದಿಗೆ, 2022ರ ಮೇ ತಿಂಗಳ ನಂತರ ಸತತವಾಗಿ ಆರ್ಬಿಐ ರೆಪೊ ದರ ಹೆಚ್ಚಿಸುತ್ತಾ ಬಂದಂತಾಗಿದ್ದು, ಒಟ್ಟಾರೆಯಾಗಿ 23ನೇ ಹಣಕಾಸು ವರ್ಷದಲ್ಲಿ ಆರ್ಬಿಐ 225 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿದಂತಾಗಿದೆ.