Widgets Magazine

ವಾಹನಸವಾರರಿಗೊಂದು ಶಾಕಿಂಗ್ ನ್ಯೂಸ್. ಸದ್ಯದಲ್ಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ| pavithra| Last Modified ಬುಧವಾರ, 5 ಡಿಸೆಂಬರ್ 2018 (10:59 IST)
ನವದೆಹಲಿ : ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ನೋಡಿ ಸಂತಸದಲ್ಲಿರುವ ವಾಹನಸವಾರರಿಗೊಂದು ಶಾಕಿಂಗ್ ನ್ಯೂಸ್. ಸದ್ಯದಲ್ಲೇ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಕೆ ಕಂಡುಬರುವ ಸಾಧ್ಯತೆ ಇದೆ ಎನ್ನಲಾಗಿದೆ.


ಹೌದು. ಇತ್ತೀಚೆಗೆ
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದ್ದ ಕಾರಣ, ಭಾರತದ ತೈಲ ಕಂಪನಿಗಳು ಅದಕ್ಕನುಗುಣವಾಗಿ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದವು.


ಆದರೆ ಸೋಮವಾರದಂದು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇ 4.65 ರಷ್ಟು ಏರಿಕೆಯಾಗಿದ್ದು, ಇದರಿಂದಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.


ಇನ್ನು ತೈಲ ರಪ್ತು ರಾಷ್ಟ್ರಗಳ ಒಕ್ಕೂಟದ ಸಭೆ ಈ ವಾರ ನಡೆಲಿದ್ದು, ಜಾಗತೀಕ ಮಾರುಕಟ್ಟೆ ತೈಲ ಪೂರೈಕೆಯನ್ನು ಕಡಿತಗೊಳಿಸುವ ಬಗ್ಗೆ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳವಾಗಲಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.





ಇದರಲ್ಲಿ ಇನ್ನಷ್ಟು ಓದಿ :