ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ವಲಯದ ಆದಾಯವು 50 ಬಿಲಿಯನ್ ಯು.ಎಸ್. ಡಾಲರ್ ಗಳಿಷ್ಟಿದ್ದು ಶೇ. 24ರ ದರದಲ್ಲಿ ಬೆಳವಣಿಗೆ ಹೊಂದುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ನಗರದ ವೈಟ್ ಫೀಲ್ಡ್ ನಲ್ಲಿ ನೆಟ್ಆಪ್ ಕಂಪನಿಯ ಬೆಂಗಳೂರು ಕ್ಯಾಂಪಸ್ನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು. ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಯ ರಾಜಧಾನಿಯೆಂದೇ ಹೆಸರಾಗಿರುವ ಕರ್ನಾಟಕವು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ವಲಯದಲ್ಲಿ ಅತ್ಯಂತ ಮುಂಚೂಣಿಯಲ್ಲಿ ಇರುವ ರಾಜ್ಯವಾಗಿ ಹೊರ